ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

fabdd8ff-1c25-43a8-8c42-5c8987f4edee
Published on

ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರ ಸಂಘದ ಚಾಮರಾಜನಗರ ಜಿಲ್ಲಾ ಶಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅಂತರ್ಜಾಲದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲೂಕು ಶಾಖೆಗಳ ಅಧ್ಯಕ್ಷರ ಸಹಿಯೊಂದಿಗೆ ದೃಢೀಕರಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು. ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ವಿದ್ಯಾಸಂಸ್ಥೆಯ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಇದೇ ಮೇ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಚಾಮರಾಜನಗರ ಶಾಖೆಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ (9482778333) ಅವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net