

ಚಾಮರಾಜನಗರ: ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸುವಲ್ಲಿ ಸಂಸದ ವಿ.ಶ್ರೀನಿವಾಸ್‌ಪ್ರಸಾದ್ ವಿಲವಾಗಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬುಧವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿದ ಭವನದ 2ನೇ ಮಹಡಿಯಲ್ಲಿರುವ ಸಂಸದ ವಿ.ಶ್ರೀನಿವಾಸ್‌ಪ್ರಸಾದ್ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿದ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ಸಂಸದರ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಭವನದ ಒಳಗೆ ಪ್ರತಿಭಟನೆ ನಡೆಸುವುದರಿಂದ, ಹಲವು ಇಲಾಖೆಯ ನೌಕರರಿಗೆ ಕಾರ್ಯನಿರ್ವಹಿಸಲು ತೊಂದರೆಯಾಗುತ್ತದೆ. ಪ್ರತಿಭಟನೆ ಮಾಡುವುದಿದ್ದರೆ ಹೊರಗಡೆ ಮಾಡಿ ಎಂದು ಪೋಲಿಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಈ ವೇಳೆ ಪೋಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಾಮಕಿ ನಡೆಯಿತು.
ಈ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಅಜೀದ್ ಮಾತನಾಡಿ, ಕೇಂದ್ರ ಸರ್ಕಾರ ಉದ್ಯಮಿಗಳಾದ ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ನೆರವಾಗುತ್ತಿದೆ. ಆದರೆ ಬಡವರು ಮತ್ತು ಹಿಂದುಳಿದವರಿಗೆ ಅಕ್ಕಿ ವಿತರಣೆ ಮಾಡಿ ಅಂದರೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದನ್ನು ಪ್ರಶ್ನೆ ಮಾಡಬೇಕಿದ್ದ ಈ ಭಾಗದ ಸಂಸದರು ಕ್ಷೇತ್ರದತ್ತಾ ತಲೆಯೇ ಹಾಕುತ್ತಿಲ್ಲ, ನಮ್ಮ ಕಷ್ಟಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಬೇಕಿದ್ದ, ರಾಜ್ಯದ ಸಂಸದರು ಬೇಜವಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರವನ್ನು ಪ್ರಶ್ನಿಸದೇ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ವಿನಾಃಕಾರಣ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಮಧುಸೂದನ್, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ನಾಯಕ್, ಮಧುಸೂದನ್, ಸೋಮೇಶ್, ಕೇಶವಮೂರ್ತಿ, ಶ್ರೀನಿವಾಸ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್(ನಗು), ರಾಮಸಮುದ್ರ ಅಕ್ಷಯ್ ಹಾಗೂ ಇತರರು ಭಾಗವಹಿಸಿದ್ದರು.