

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ಆಲಂಬಾಡಿ ಬಳಿಯ ಅರಣ್ಯ ಪ್ರದೇಶದಲ್ಲಿ ಗುರುವಾರ ಸುಮಾರು 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಕ್ರಿಮಿನಾಶಕ ಸೇವಿಸಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ.
ಮೃತಪಟ್ಟಿರುವ ವ್ಯಕ್ತಿಯ ಸ್ಥಳದಲ್ಲಿ ಹಗ್ಗ, ಚಾಕು ಹಾಗೂ ಸೇವಿಸಿದ ಕ್ರಿಮಿನಾಶಕದ ಬಾಟಲಿ ದೊರೆತಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮಹದೇಶ್ವರಬೆಟ್ಟದ ಪೋಲಿಸರು ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ಮೃತದೇಹವನ್ನು ಚಾ.ನಗರ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.