

ಚಾಮರಾಜನಗರ:ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಅಂಗವಿಕಲರಿಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
ಈ ಸಂಬಂಧ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಪೂವಿತಾಗೆ ಬುಧವಾರ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮನವಿ ಸಲ್ಲಿಸಿ ರಾಜ್ಯ ಸರ್ಕಾರದ ಗಮನ ಸೆಳೆಯಬೇಕೆಂದು ಕೋರಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಮನವಿ ಸಲ್ಲಿಸಿ ಜಿಲ್ಲಾಧ್ಯಕ್ಷ ಎಂ.ರಮೇಶ್ ಮಾತನಾಡಿ, ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿದಂತೆಯೇ, ಅಂಗವಿಕಲರೆಲ್ಲರಿಗೂ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಬೇಕು. ಅಂಗವಿಕಲರಿಗೆ ನೀಡುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡಬೇಕು. ಜಿಲ್ಲೆಯ ಅಂಗವಿಕಲರ ಹಾಗೂ ನಾಗರೀಕ ಸಬಲೀಕರಣ ಇಲಾಖೆಗೆ ಪೂರ್ಣಪ್ರಮಾಣದ ಅಧಿಕಾರಿ ನೇಮಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಅಂಗವಿಕಲರ ಬ್ಯಾಕ್‌ಲಾಗ್ ಹುದ್ದೆಯನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು. ಅಂಗವಿಕಲ ಪದವೀಧರ ನಿರುದ್ಯೋಗಿಗಳಿಗೆ ಈ ವರೆಗಿನ ನಿರುದ್ಯೋಗಿ ಭತ್ಯೆಯನ್ನು ನೀಡಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಪ್ರಭಾರ ಜಿಲ್ಲಾಧಿಕಾರಿ ಎಸ್.ಪೂವಿತಾ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಕೆ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಜ್ರಮಣಿ, ಸಿದ್ದಯ್ಯ, ಸಿ.ಎಂ.ನಾಗರಾಜು, ಶಿವಶಂಕರ್, ರೂಪೇಶ್, ವಿ.ಕುಮಾರ್ ಉಪಸ್ಥಿತರಿದ್ದರು.