ಟಿಪ್ಪರ್ ಡಿಕ್ಕಿ ಸವಾರನಿಗೆ ಗಾಯ

accident-15
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗೇಟ್ ಸಮೀಪ ಟಿಪ್ಪರ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ತೀವ್ರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಉತ್ತರ ಕನ್ನಡ ಮೂಲದ ಭರತ್ ದೊಡ್ಡಮನಿ(26) ಗಾಯಗೊಂಡವರು. ವಿಷಯ ತಿಳಿದ ಕೂಡಲೇ ಹೊಯ್ಸಳ ಪೊಲೀಸರು ಸ್ಥಳಕ್ಕೆ ತೆರಳಿ ಕೆಳಗೆ ಬಿದ್ದಿದ್ದ ಭರತ್‌ನನ್ನು ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net