20ರಂದು ನಗರದಲ್ಲಿ ಉದ್ಯೋಗಕ್ಕಾಗಿ ನೇರ ಸಂದರ್ಶನ

job new
Published on

ಚಾಮರಾಜನಗರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ರಾಜ್ ಬಯೋ ಆರ್ಗ್ಯಾನಿಕ್ಸ್ ಇವರ ಸಹಯೋಗದೊಂದಿಗೆ ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಮೇ 20ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ 2ನೇ ಮಹಡಿಯ ಕೊಠಡಿ ಸಂಖ್ಯೆ 210ರ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ಸಂದರ್ಶನದಲ್ಲಿ ಪಿಯುಸಿ ಮತ್ತು ಯಾವುದೇ ಪದವಿ ಹೊಂದಿರುವ 23 ರಿಂದ 40ರ ವಯೋಮಿತಿಯ ಪುರುಷ ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಯ ವಿದ್ಯಾರ್ಹತೆಗೆ ಅನುಗುಣವಾಗಿ ತಿಂಗಳಿಗೆ 23 ರಿಂದ 27 ಸಾವಿರ ರೂ.ಗಳವರೆಗೆ ವೇತನ ದೊರೆಯಲಿದೆ. ಅಭ್ಯರ್ಥಿಗಳು ತಮ್ಮ ಸ್ವ ವಿವರ, ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿಗಳು ದೂ.ಸಂ 08226-224430, ಮೊ.ಸಂ 9611665329 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net