

ಚಾಮರಾಜನಗರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಅಧೀನದ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹನೂರು ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಮತ್ತು ಯಡವನಹಳ್ಳಿ ಮೊರಾರ್ಜಿ ದೇಸಾಯಿ ಉನ್ನತೀಕರಿಸಿದ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿಗೆ 2024-25ನೇ ಸಾಲಿಗೆ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ (ಪಿಸಿಎಂಬಿ ಮತ್ತು ಪಿಸಿಎಂಸಿ) ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 21ರವರೆಗೆ ವಿಸ್ತರಿಸಲಾಗಿದೆ.
2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಜಿ ಸಲ್ಲಿಸಲು ಇಚ್ಚಿಸುವ ಪೋಷಕರು ಮತ್ತು ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು ಮೇ 21 ರೊಳಗೆ ಸಲ್ಲಿಸಬಹುದು.
ಚಾಮರಾಜನಗರ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಜಿಲ್ಲೆಯ ಎಲ್ಲ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ವಸತಿ ಶಾಲೆಯ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯ ಪುಸ್ತಕ ಇತರ ಮೂಲ ಸೌಕರ್ಯಗಳೊಂದಿಗೆ ಸಿ.ಇ.ಟಿ., ನೀಟ್, ಜೆ.ಇ.ಇ. ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್. ಬಿ (ಮೊ.ಸಂ. 8310291951), ಹನೂರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಯೋಗೇಶ್. ಎಸ್ (ಮೊ.ಸಂ. 8660188201), ಯಡವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಕೆ.ಪಿ. ಚಂದ್ರು (ಮೊ.ಸಂ. 8105657451) ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.