ವಿಕಿಪೀಡಿಯಾ ಸಮುದಾಯ ಬೆಳವಣಿಗೆ ಕಾರ್ಯಾಗಾರ

17rajesh2
Published on

ಚಾಮರಾಜನಗರ: ಕನ್ನಡ ಭಾಷೆ ಉಳಿಯಬೇಕಾದರೆ ಅಂತರ್ಜಾಲದಲ್ಲಿ ಮಾಹಿತಿ ಸಾಹಿತ್ಯ ಅಥವಾ ಜ್ಞಾನ ಕನ್ನಡದಲ್ಲಿ ಸಿಗುವಂತಾಗಬೇಕು. ಈಗಾಗಲೇ ಕಥನ ಸಾಹಿತ್ಯ ಕನ್ನಡದಲ್ಲಿ ಲಭ್ಯವಿದೆ. ಆದರೆ, ಮಾಹಿತಿ ಸಾಹಿತ್ಯ ಹೆಚ್ಚಿನ ಪ್ರಮಾಣದಲ್ಲಿ ಇಲ್ಲ ಎಂದು ತಂತ್ರಜ್ಞಾನ ಬರಹಗಾರ, ಕರಾವಳಿ ವಿಕಿಮಿಡಿಯನ್ಸ್ ಕಾರ್ಯಾಧ್ಯಕ್ಷ ಯು.ಬಿ.ಪವನಜ ಅಭಿಪ್ರಾಯಪಟ್ಟರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಿರುವ ಎರಡು ದಿನಗಳ ವಿಕಿಪೀಡಿಯಾ ಸಮುದಾಯ ಬೆಳವಣಿಗೆ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಸ್ತುತ ಇಂಗ್ಲಿಷ್ ತಿಳಿದಿದ್ದರೆ ಮಾತ್ರ ಜ್ಞಾನ ಹೆಚ್ಚಾಗುತ್ತದೆ ಎಂಬ ಭಾವನೆ ಇದೆ. ಇದು ಸುಳ್ಳು. ಕನ್ನಡ ಕಲಿತರೂ ಅವಕಾಶಗಳು ಹೆಚ್ಚಾಗಿದ್ದು, ಜ್ಞಾನ ಸಂಪಾದನೆ ಮಾಡಬಹುದು ಎಂದು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಶಿಕ್ಷಕ ಬಿ.ಎಸ್.ವಿನಯ್ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಎನ್.ಮಹದೇವಸ್ವಾಮಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಜ್ಞಾ ದೇವಾಡಿಗ, ಕನ್ನಡ ವಿಭಾಗದ ಮುಖ್ಯಸ್ಥ ಬಿ.ಬಿ.ವರಪ್ರಸಾದ್, ಬೋಧಕರು, ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net