ಮೇ 20 ರಂದು ಸ್ವಾಭಿಮಾನಿಗೆ ಸಾವಿರದ ನುಡಿನಮನ

Mamballi Nanjundaswamy
Published on

ಚಾಮರಾಜನಗರ : ಸಂಸದ ವಿ.ಶ್ರೀನಿವಾಸಪ್ರಸಾದ್ ಹಿತೈಷಿಗಳು ಹಾಗೂ ಅಭಿಮಾನಿಗಳ ಒಕ್ಕೂಟದ ವತಿಯಿಂದ ಮೇ 20 ರಂದು ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಾಂಬಳ್ಳಿ ನಂಜುಂಡಸ್ವಾಮಿ ತಿಳಿಸಿದರು.

ಯಳಂದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ವಾಟಾಳ್ ಸೂರ್ಯ ಸಿಂಹಾಸನ ಮಠದ ಶ್ರೀಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಟಿ.ನರಸೀಪುರ ನಳಂದ ಬೌದ್ಧ ವಿಹಾರದ ಬೋಧಿ ರತ್ನ ಬಂತೇಜಿ ಸಾನ್ನಿಧ್ಯ ವಹಿಸುವರು. ಕೊಳ್ಳೇಗಾಲ ಶಾಸಕ ಎಂ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಶ್ರೀನಿವಾಸಪ್ರಸಾದ್ ಅವರ ಪುತ್ರಿ ಪ್ರತಿಮಾಪ್ರಸಾದ್ ಉಪಸ್ಥಿತಿ ವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಮಾಜಿ ಶಾಸಕ ಎಸ್.ನಂಜುಂಡಸ್ವಾಮಿ, ಆರ್.ನರೇಂದ್ರ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ನುಡಿ ನಮನ ಸಲ್ಲಿಸುವರು ಎಂದರು.
ಈ ಕಾರ್ಯಕ್ರಮಕ್ಕೆ ಯಳಂದೂರು ತಾಲೂಕಿನ ಪ್ರತಿ ಗ್ರಾಮಗಳಿಂದಲೂ ಸಂಸದ ವಿ.ಶ್ರೀನಿವಾಸಪ್ರಸಾದ್ ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವರು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಜೆ.ಯೋಗೇಶ್, ಕೆಪಿಸಿಸಿ ಮಾಜಿ ಸದಸ್ಯ ಕೆ.ಎಸ್.ಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net