

ಚಾಮರಾಜನಗರ: ಸಂಸದ ವಿ.ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ವತಿಯಿಂದ ಮೇ 20 ರಂದು ವಿ.ಶ್ರೀನಿವಾಸಪ್ರಸಾದ್ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರಿನ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಮೈಸೂರಿನ ವಿಶ್ವ ಮೈತ್ರಿ ಬುದ್ಧ ವಿಹಾರದ ಡಾ.ಕಲ್ಯಾಣಸಿರಿ ಭಂತೇಜಿ ಸಾನ್ನಿಧ್ಯ ವಹಿಸುವರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ನೆರವೇರಿಸುವರು. ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶ್ರೀನಿವಾಸಪ್ರಸಾದ್ ಅವರ ಪತ್ನಿ ಭಾಗ್ಯಲಕ್ಷ್ಮೀ ಪ್ರಸಾದ್ ಹಾಗೂ ಕುಟುಂಬಸ್ಥರು ಉಪಸ್ಥಿತರಿರುವರು ಎಂದು ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರಮುಖವಾಗಿ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ ನುಡಿನಮನ ಸಲ್ಲಿಸುವರು. ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಗಣೇಶ್‌ಪ್ರಸಾದ್, ಎಂ.ಆರ್. ಮಂಜುನಾಥ್, ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಂಸದ ಎಂ.ಶಿವಣ್ಣ, ಮಾಜಿ ಶಾಸಕರಾದ ಆರ್.ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಬಿ.ಹರ್ಷವರ್ಧನ್, ಎಸ್.ಬಾಲರಾಜ್, ಸಿ.ಎಸ್.ನಿರಂಜನ್‌ಕುಮಾರ್, ಕಾಂಗ್ರೆಸ್ ಮುಖಂಡ ಸುನೀಲ್ ಬೋಸ್, ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್.ನಾಗಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಆರ್.ಮಹದೇವ್, ಮಾಜಿ ಸದಸ್ಯ ನಲ್ಲೂರು ಸೋಮೇಶ್, ಪುಟ್ಟಸ್ವಾಮಿ, ನಗರಸಭೆ ಮಾಜಿ ಸದಸ್ಯ ಮೊಹಮ್ಮದ್ ಅಸ್ಗರ್ ಮುನ್ನಾ, ಆರ್.ಚಂದ್ರು, ಎಪಿಎಂಸಿ ಮಾಜಿ ನಿರ್ದೇಶಕ ಬಸಪ್ಪನಪಾಳ್ಯ ನಟರಾಜ್ ಇದ್ದರು.