

ಗುಂಡ್ಲುಪೇಟೆ: ತಾಲೂಕಿನ ಚಿಕ್ಕತುಪ್ಪೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ವಿಜೃಂಭಣೆಯಿಂದ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು.
ಮಂಗಳವಾದ್ಯಗಳು ಹಾಗೂ ಭಜನಾ ತಂಡಗಳು ಹಾಗೂ ಅಲಂಕೃತ ಎತ್ತುಗಳೊಂದಿಗೆ ಬಸವೇಶ್ವರರ ಭಾವಚಿತ್ರವನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಪೂಜಾ ಮಠದ ಚನ್ನವೀರಸ್ವಾಮೀಜಿ, ಗ್ರಾಮದ ಮುಖಂಡರು ಹಾಗೂ ಯುವಕರು ಇದ್ದರು.