ಶ್ರೀನಿವಾಸ್‌ಪ್ರಸಾದ್‌ಗೆ ನುಡಿನಮನ 21ಕ್ಕೆ

v srinivasprasad (bjp)
Published on

ಚಾಮರಾಜನಗರ: ಭಾರತೀಯ ಜನತಾ ಪಕ್ಷ ಜಿಲ್ಲಾ ಘಟಕದ ವತಿಯಿಂದ ಮೇ 21ರಂದು ಸಂಸದ ವಿ.ಶ್ರೀನಿವಾಸ್‌ಪ್ರಸಾದ್ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಗರದ ಕುಲುಮೆ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಭಾಗವಹಿಸುವರು. ಅಲ್ಲದೆ ಪಕ್ಷದ ಹಿರಿಯರು, ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ಮಂಡಲದ ಎಲ್ಲ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net