ಚಾಮರಾಜನಗರ: ತಾಲೂಕಿನ ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಎಲ್‌ಕೆಜಿ ತರಗತಿಗಳು ಪ್ರಾರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಒಬ್ಬರು ಅತಿಥಿ ಶಿಕ್ಷಕಿ ಹಾಗೂ ಒಬ್ಬರು ಸಹಾಯಕಿ ಹುದ್ದೆ ಖಾಲಿ ಇದೆ. ಈ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದ್ದು, ಎನ್‌ಎಸ್‌ಟಿ/ಟಿಸಿಎಚ್ /ಡಿ.ಇಡಿ ಮಾಡಿರುವ ಮಹಿಳೆಯರು ಅತಿಥಿ ಶಿಕ್ಷಕಿ ಹುದ್ದೆಗೆ ಹಾಗೂ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರುವ ಮಹಿಳೆಯರು ಸಹಾಯಕ ಹುದ್ದೆಗೆ ಮೇ 20 ರಿಂದ 25 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ: 8310434085 ಅಥವಾ 6362441646 ನಂಬರ್‌ಗೆ ಸಂಪರ್ಕಿಸಬಹುದಾಗಿದೆ ಎಂದು ಶಾಲೆಯ ಮುಖ್ಯಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.