ಚಾಮರಾಜನಗರ: ಕರ್ನಾಟಕ ವಿಧಾನಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆ ಸಂಬಂಧ ಭಾರತ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರಾಗಿ ನೇಮಕ ಮಾಡಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗೆ ಡಾ. ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು, ಮೈಸೂರಿನ ಅಬಕಾರಿ ಉಪ ಆಯುಕ್ತರಾದ ಎಸ್. ನಾಗರಾಜಪ್ಪ (ಮೊ. 9449597178) ಅವರು ಸಹಾಯಕ ಅಧಿಕಾರಿಗಳಾಗಿರುತ್ತಾರೆ. ಚುನಾವಣಾ ವೀಕ್ಷಕರು ಈಗಾಗಲೇ ಚುನಾವಣಾ ಕೆಲಸ-ಕಾರ್ಯಗಳ ವೀಕ್ಷಣೆ ನಡೆಸುತ್ತಿದ್ದು, ಸದರಿ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು ಅಥವಾ ಸಂಪರ್ಕಿಸಲು ದೂ.ಸಂ 7204214565 ಗೆ ಕರೆ ಮಾಡಬಹುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.