ಚಾಮರಾಜನಗರ: ಕರ್ನಾಟಕ ವಿಧಾನಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಮೇ 9 ರಿಂದ 16ರವರೆಗೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯನ್ನು ಮೇ 17ರಂದು ಬೆಳಗ್ಗೆ 11 ಗಂಟೆಗೆ ನಡೆಸಲಾಯಿತು. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲ 13 ನಾಮಪತ್ರಗಳು ಅಂಗೀಕೃತವಾಗಿವೆ. ಮೇ 20ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿರುತ್ತದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.