ರಾಜೇಂದ್ರ ಶ್ರೀಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಪ್ರಸಾದ್

20rajesh9
Published on

ಚಾಮರಾಜನಗರ: ಶ್ರೀನಿವಾಸ್‌ಪ್ರಸಾದ್ ಅವರು ರಾಜಕಾರಣದಿಂದ ಮಾತ್ರವಲ್ಲದೇ ಉತ್ತಮವಾದ ವ್ಯಕ್ತಿತ್ವವನ್ನು ಹೊಂದಿದ್ದರಿಂದ ಇಷ್ಟೊಂದು ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು. ಸುತ್ತೂರಿನ ರಾಜೇಂದ್ರ ಶ್ರೀಗಳೊಂದಿಗೆ ನಿಕಟವಾದ ಸಂಪರ್ಕವನ್ನು ಹೊಂದಿದ್ದರು ಎಂದು ಸುತ್ತೂರು ಮಠದ ಶ್ರೀ ದೇಶಿಕೇಂದ್ರ ಸ್ವಾಮೀಜಿಯವರು ಹೇಳಿದರು.

ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದರು. ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಚೆನ್ನಾಗಿ ಅಧ್ಯಯನ ಮಾಡುತ್ತಿದ್ದರು. ಅವರಲ್ಲಿ ಅಧ್ಯಯನಶೀಲತೆಯ ಒಳ್ಳೆಯ ಗುಣವಿತ್ತು. ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ಚಿಂತನೆಗಳನ್ನು ಅಪಾರವಾಗಿ ಮೈಗೊಡಿಸಿಕೊಂಡಿದ್ದರು ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮೈಸೂರಿನ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಶ್ರೀನಿವಾಸ್ ಪ್ರಸಾದ್ ಅವರ ಪತ್ನಿ ಭಾಗ್ಯಲಕ್ಷ್ಮೀ ಪ್ರಸಾದ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಸಂಸದ ಎಂ.ಶಿವಣ್ಣ, ಮಾಜಿ ಶಾಸಕರಾದ ಬಿ.ಹರ್ಷವರ್ಧನ್, ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಡಾ.ಮೋಹನ್, ಆರ್.ಚಂದ್ರು ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net