ಹಳ್ಳದ ನೀರು, ಕೊಳ್ಳಿ ಬೆಳಕೇ ಗತಿ

nagaratnamma
Published on

ಹನೂರು: ಈಗಲೂ ನಮಗೆ ಕುಡಿಯಲು ಹಳ್ಳದ ನೀರು, ಬೆಳಕಿಗೆ ಕೊಳ್ಳಿಯನ್ನೇ ಬಳಸಬೇಕಾಗಿದೆ. ಈ ಪರಿಸ್ಥಿತಿಯಲ್ಲಿದ್ದರೂ ಯಾರೂ ನಮಗೆ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ ಎಂದು ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಸದಸ್ಯೆ ನಾಗರತ್ನಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ಧ್ವಂಸ ಪ್ರಕರಣ ನಡೆದಿದ್ದ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ನಮ್ಮ ಗ್ರಾಮಗಳಿಗೆ ಮೂಲಸೌಕರ್ಯಕ್ಕಾಗಿ ಒತ್ತಾಯಿಸಿ ಮತದಾನ ಬಹಿಷ್ಕಾರ ಮಾಡಿದ್ದೆವು. ಇದಕ್ಕೂ ಮೊದಲು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿ ಮೂಲಸೌಕರ್ಯ ಕಲ್ಪಿಸಬೇಕೆಂದು ಕೋರಿದ್ದೆವು. ಇದರಿಂದ ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರಕ್ಕೆ ಬರಬೇಕಾಯಿತು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net