

ಚಾಮರಾಜನಗರ: ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ಗಾರ್ನಿಯರ್ ಕಂಪನಿ ವತಿಯಿಂದ ಭಾನುವಾರ ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಹೇರ್‌ಕಲರಿಂಗ್ ಅಭಿಯಾನಕ್ಕೆಎರಡನೇ ದಿನವೂ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದ ಸಮೀಪದಲ್ಲಿರುವ ಪರಿವರ್ತನಾ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಮಹಿಳೆಯರು, ಪುರುಷರು, ಯುವಕ-ಯುವತಿಯರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ತಮ್ಮ ನೆಚ್ಚಿನ ಬಣ್ಣಗಳನ್ನು ಕೂದಲಿಗೆ ಹಚ್ಚಿಸಿಕೊಂಡು ಸಂತಸ ವ್ಯಕ್ತಪಡಿಸಿದರು.
ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಸುರೇಶ್‌ಗೌಡ, ಪರಮೇಶ್ವರಪ್ಪ, ಜಿಲ್ಲಾ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ವಿರುಪಾಕ್ಷಸ್ವಾಮಿ, ಶಿಕ್ಷಕರಾದ ಸುಶೀಲಾ ಚಾಲನೆ ನೀಡಿದರು. ಬಳಿಕ ನೂರಾರು ಸಂಖ್ಯೆಯಲ್ಲಿ ವಿವಿಧ ಬಡಾವಣೆಗಳಿಂದ ಸಾರ್ವಜನಿಕರು ಆಗಮಿಸಿ ಬಣ್ಣ ಹಚ್ಚಿಕೊಳ್ಳುವುದರ ಜತೆಗೆ ವಿಜಯವಾಣಿ ಆಯೋಜಿಸುವ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಚರ್ಮದ ಅಲರ್ಜಿ ಉಂಟಾಗುತ್ತದೆ ಎಂಬ ಕಾರಣದಿಂದ ಹೇರ್ ಡ್ರೈ ಮಾಡಿಸುವುದರಲ್ಲಿ ಹಿಂದೇಟು ಹಾಕುತ್ತಿದ್ದೆ. ನಗರದಲ್ಲಿ ವಿಜಯವಾಣಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಗಾರ್ನಿಯರ್ ಕಂಪನಿಯ ಬಣ್ಣ ಹಚ್ಚಿಸಿಕೊಂಡರೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಿಳಿದು ಸಂತಸವಾಯಿತು. ಇದು ಸಾರ್ವಜನಿಕರಿಗೆ ಅನುಕೂಲವಾಗಿದ್ದು, ಸಾಕಷ್ಟು ಜಾಗೃತಿಯೂ ಮೂಡುತ್ತಿದೆ.-ರಾಜು, ರಾಮಸಮುದ್ರ ಬಡಾವಣೆ, ಚಾಮರಾಜನಗರ