ಅಪರಿಚಿತ ಶವಕ್ಕೆ ಪೊಲೀಸರಿಂದ ಅಂತ್ಯಸಂಸ್ಕಾರ

26 HANUR 5
Published on

ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ಅರಣ್ಯ ಪ್ರದೇಶದ ತುಳಸಿಕೆರೆ ಗ್ರಾಮದ ಹಳ್ಳ ಸಮೀಪದಲ್ಲಿ ಭಾನುವಾರ ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವಕ್ಕೆ ಮಲೆಮಹದೇಶ್ವರ ಬೆಟ್ಟದ ಪೊಲೀಸರು ಅಂತ್ಯ ಸಂಸ್ಕಾರ ನೆರವೇರಿಸುವುದರ ಮೂಲಕ ಮಾನವೀಯತೆ ಮರೆದಿದ್ದಾರೆ.

ಮ.ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ತುಳಸಿಕೆರೆ ಹಳ್ಳ ಸಮೀಪದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ಇನ್ಸ್‌ಪೆಕ್ಟರ್ ಅವರ ಮಾರ್ಗದರ್ಶನದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಮುಖ್ಯ ಪೇದೆ ಜಯರಾಮ್ ಹಾಗೂ ಸಿಬ್ಬಂದಿ ತಾವೇ ಮುಂದೆ ನಿಂತು ಮ.ಬೆಟ್ಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದರು. ಈ ಬಗ್ಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net