ಅಸ್ವಸ್ಥರ ಆರೋಗ್ಯ ವಿಚಾರಿಸಿದ ಡಿಸಿ, ನರೇಂದ್ರ

26-KGLPHOTO-2,, ( (2)
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 42;
Published on

ಕೊಳ್ಳೇಗಾಲ: ಕಲುಷಿತ ನೀರು ಸೇವನೆಯಿಂದ ತಾಲೂಕಿನ ಮಧುವನಹಳ್ಳಿಯ ಆರವನಪುರ ಬೀದಿಯ ನಿವಾಸಿಗಳಿಗೆ ಕಾಣಿಕೊಂಡ ವಾಂತಿ-ಭೇದಿ ಪ್ರಕರಣದ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮಾಜಿ ಶಾಸಕ ಆರ್.ನರೇಂದ್ರ ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು.

ಸಂಗೀತಾ, ಪುಟ್ಟಮಾದಮ್ಮ ಅವರ ಆರೋಗ್ಯ ವಿಚಾರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್, ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಕೆಲವರು ಅವಸ್ಥರಾಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದೇವೆ. ಯಾರಿಗೂ ಜೀವ ಭಯವಿಲ್ಲ. ಪ್ರಸ್ತುತ ನಾಲ್ವರು ಆಸ್ಪತ್ರೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಇಲ್ಲಿರುವ ಕುಡಿಯುವ ನೀರು ಪೂರೈಸುವ 2 ಬೋರ್‌ವೇಲ್‌ಗಳು ಮಳೆ ಬಿದ್ದಾಗ ಕಲುಷಿತವಾಗಿದೆ ಎಂದು ಬುಧವಾರ ತಿಳಿದು ಬಂದಿದೆ. ಹೀಗಾಗಿ ಕೂಡಲೇ ಆ ನೀರು ಪೂರೈಕೆ ಸ್ಥಗಿತಗೊಳಿಸಿ, ಆ ನೀರನ್ನು ಸೇವಿಸದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ನೀರು ಸರಬರಾಜು ಮಾಡುವ ಬೋರ್ ಪಕ್ಕದಲ್ಲಿರುವ ಚರಂಡಿ ಸ್ವಚ್ಛ ಮಾಡಲಾಗುತ್ತದೆ. ಇನ್ನು ವಾರದಲ್ಲಿ ಗ್ರಾಮಕ್ಕೆ ಕಾವೇರಿ ನೀರು ಸರಬರಾಜಿಗೆ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಚರಂಡಿಯಲ್ಲಿ ನೀರು ನಿಲ್ಲುತ್ತದೆ:
ಕಲುಷಿತ ನೀರಿನಿಂದ ಆರೋಗ್ಯ ಸಮಸ್ಯೆಕ್ಕೊಳಗಾದವರ ಭೇಟಿ ಮಾಡಲು ಬಂದಿದ್ದ ಜಿಲ್ಲಾಧಿಕಾರಿಗೆ ಆರವನಪುರ ಬೀದಿಯ ಮಹಿಳೆಯೊಬ್ಬರು ಬೀದಿಯ ಶುಚಿತ್ವದ ಬಗ್ಗೆ ಮೌಖಿಕವಾಗಿ ದೂರು ನೀಡಿದರು. ಚರಂಡಿ ನೀರು ನಿಂತಲೇ ನಿಂತಿದೆ. ಈಗಿರುವಾಗ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಎಂದು ಆಳಲು ವ್ಯಕ್ತಪಡಿಸಿಕೊಂಡರು. ಇದಕ್ಕೆ ಡಿಸಿ ಶಿಲ್ಪಾನಾಗ್ ಪ್ರತಿಕ್ರಿಯಿಸಿ, ಇಂದಿನಿಂದ ಕುಡಿಯುವುದಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತದೆ. ಚರಂಡಿ ಸ್ವಚ್ಛಗೊಳಿಸಲು ಗ್ರಾ.ಪಂ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಪಿಡಿಒಗೆ ತರಾಟೆ:
ಮಾಜಿ ಶಾಸಕ ಆರ್.ನರೇಂದ್ರ ಮಧುವನಹಳ್ಳಿ ಗ್ರಾ.ಪಂ ಪಿಡಿಒ ಶೋಭಾರಾಣಿ ಅವರಿಗೆ ಜಿಲ್ಲಾಧಿಕಾರಿ ಎದುರೇ ತರಾಟೆಗೆ ತೆಗೆದುಕೊಂಡರು. ಕಲುಷಿತ ನೀರಿನಿಂದ ಗ್ರಾಮದಲ್ಲಿ ಕೆಲವರಿಗೆ ಮೂರು ದಿನಗಳ ಹಿಂದೆಯೇ ವಾಂತಿ, ಭೇದಿ ಕಾಣಿಸಿಕೊಂಡಿದೆ. ಈ ಬಗ್ಗೆ ತಾಲೂಕು ಆಡಳಿತಕ್ಕೆ ಪಿಡಿಒ ಮಾಹಿತಿ ನೀಡಿದ್ದೀರಾ? ಎಂದು ಪ್ರಶ್ನಿಸಿದ್ದಲ್ಲದೆ, ಸ್ಥಳದಲ್ಲಿದ್ದ ತಹಸೀಲ್ದಾರ್ ಮಂಜುಳಾ ಅವರಿಗೆ ಈ ಬಗ್ಗೆ ನಿಮಗೆ ಮಾಹಿತಿ ಇದೆಯೇ ಎಂದು ಕೇಳಿದರು. ಅದಕ್ಕೆ ತಹಸೀಲ್ದಾರ್ ಅವರು ಇಲ್ಲ ಎಂದಾಗ ಆರ್.ನರೇಂದ್ರ ಅವರು ಪಿಡಿಒ ವಿರುದ್ಧ ಅಸಮಾಧಾನ ಹೊರಹಾಕಿದರು.

ಆಸ್ಪತ್ರೆಗೆ ಭೇಟಿ:
ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹದೇವಮ್ಮ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಮೂರ್ತಿ, ಪುಟ್ಟರಾಜು ಅವರನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್, ಮಾಜಿ ಶಾಸಕ ಆರ್.ನರೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್ ಮಂಜುಳಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಹರೀಶ್, ಪಿಡಿಒ ಶೋಭರಾಣಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net