

ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಎಂಎಸ್‌ಐಎಲ್ ಅಧ್ಯಕ್ಷ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿವಿಧೆಡೆ ಮತಯಾಚನೆ ನಡೆಸಿದರು.
ತಾಲೂಕಿನ ಮಂಗಲ, ಮಾದಾಪುರದಲ್ಲಿನ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ಬಳಿ ಮತ ಕೇಳಿದರು. ಹಿಂದಿನ ಯುಪಿಎ ಸರ್ಕಾರ ಮತ್ತು ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಶಿಕ್ಷಕರ ಹಲವಾರು ಬೇಡಿಕೆ ಈಡೇರಿಸಿದೆ. ಮರಿತಿಬ್ಬೇಗೌಡ ನಾಲ್ಕು ಬಾರಿ ಗೆಲುವು ಸಾಧಿಸಿ, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಅವರ ಗೆಲುವು ಈ ಬಾರಿ ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಕಾಗಲವಾಡಿ ಚಂದ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಮಾದಾಪುರ ಗ್ರಾಪಂ ಅಧ್ಯಕ್ಷ ರೂಪೇಶ್, ಮಂಗಲ ಗ್ರಾಪಂ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಜಿಲ್ಲಾ ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷ ಸ್ವಾಮಿ, ಮಾಜಿ ಗ್ರಾ.ಪಂ. ಅಧ್ಯಕ್ಷ ಶಿವಣ್ಣ, ಮುಖಂಡರಾದ ಮಂಗಲ ಶಿವಣ್ಣ, ಸೋಮಣ್ಣೆಗೌಡ, ಮಹದೇವ್ ಮಸಗಾಪುರ, ವಿನೋದ್, ದೂಡ್ಡಸ್ವಾಮಿ ಮತ್ತು ಇತರರು ಇದ್ದರು.