ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್ ಬಿರುಸಿನ ಪ್ರಚಾರ

29rajesh4
Published on

ಚಾಮರಾಜನಗರ: ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಪರವಾಗಿ ಜೆಡಿಎಸ್ ಮುಖಂಡ ಆಲೂರು ಮಲ್ಲು ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮತಯಾಚನೆ ಮಾಡಿದರು.

ತಾಲೂಕಿನ ಆಲೂರು ಸರ್ಕಾರಿ ಸಂಯಕ್ತ ಪದವಿ ಪೂರ್ವ ಕಾಲೇಜು, ಕಾಗಲವಾಡಿ ಸರ್ಕಾರಿ, ಹೊಂಗನೂರು ಸರ್ಕಾರಿ ಪ್ರೌಢಶಾಲೆ, ಜ್ಯೋತಿಗೌಡನಪುರ ಸರ್ಕಾರಿ ಹಾಗೂ ಚಂದಕವಾಡಿ ಸರ್ಕಾರಿ ಪ್ರೌಢಶಾಲೆ, ಕಾಲೇಜಿನ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು.

ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರು ನಾನಾ ಪಕ್ಷಗಳಲ್ಲಿ ಸ್ಪರ್ಧಿಸಿ ನಾಲ್ಕು ಬಾರಿ ಗೆದ್ದಿದ್ದಾರೆ. ಶಿಕ್ಷಕರ ಸಮಸ್ಯೆಗಳು ಮಾತ್ರ ಈಡೇರಿಸಿಲ್ಲ. ಜತೆಗೆ ಶಿಕ್ಷಕರ ಹಿತಬಯಸಿಲ್ಲ. ಹಾಗಾಗಿ ಈ ಬಾರಿ ವಿವೇಕಾನಂದ ಅವರಿಗೆ ಅವಕಾಶ ನೀಡಬೇಕು ಎಂದು ಕೋರಿದರು.

ಬಿಜೆಪಿ ಆಲೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಾನಂದ್, ಜೆಡಿಎಸ್ ಮುಖಂಡರಾದ ರಾಮಚಂದ್ರನಾಯಕ, ಪಣ್ಯದಹುಂಡಿ ರಾಜು, ಹೊಂಗನೂರು ರಾಜು, ಮುರುಗೇಶ್, ಕಾಗಲವಾಡಿ ನಾಗರಾಜು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net