ನಾಳೆ ಕಾಲ್ನಡಿಗೆ ಜಾಥಾ

Published on

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಮೇ 31ರಂದು ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 9.30ಕ್ಕೆ ಆರಂಭವಾಗುವ ಕಾಲ್ನಡಿಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net