ಪ್ರವೇಶಾತಿಗೆ ಅರ್ಜಿ ಆಹ್ವಾನ

application
Published on

ಚಾಮರಾಜನಗರ: ಕೊಳ್ಳೇಗಾಲ ಚಿಲಕವಾಡಿ ಬೆಟ್ಟದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2024-25ನೇ ಸಾಲಿಗೆ ಪ್ರಥಮ ವರ್ಷದ ಡಿಪ್ರೋಮ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದ್ದು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಅಥವಾ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಸೈನ್ಸ್ (ಸಿಎಸ್), ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ (ಇ.ಸಿ), ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ (ಇ.ಇ) ಕೋರ್ಸುಗಳು ಲಭ್ಯವಿದೆ. ಮೊದಲು ಬಂದವರಿಗೆ ಆದ್ಯತೆ ಮೇರೆಗೆ ನೇರವಾಗಿ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೊಳ್ಳೇಗಾಲ ಚಿಲಕವಾಡಿ ಬೆಟ್ಟದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ದೂ.ಸಂ 9972014274, 7892023182 ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಂಶುಪಾಲರಾದ ಕೆ.ಜಿ.ಕಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net