ಮರಿತಿಬ್ಬೇಗೌಡರ ಪರ ಶಾಸಕ ಗಣೇಶ್ ಪ್ರಸಾದ್ ಮತಬೇಟೆ

30-GPT-2
Published on

ಗುಂಡ್ಲುಪೇಟೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರ ಪರವಾಗಿ ಬುಧವಾರ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಪಟ್ಟಣದ ವಿವಿಧ ಶಾಲಾ, ಕಾಲೇಜುಗಳಿಗೆ ತೆರಳಿ ಮತಯಾಚಿಸಿದರು.

ಈ ವೇಳೆ ಮಾತನಾಡಿ, ರಾಜ್ಯದ ಶಿಕ್ಷಕ ಸಮುದಾಯದ ಪ್ರತಿನಿಧಿಯಾಗಿ, ಶಿಕ್ಷಣ ಕ್ಷೇತ್ರದ ಘನತೆ ಮತ್ತು ಶಿಕ್ಷಕರ ಆತ್ಮ ಗೌರವಕ್ಕೆ ಕಿಂಚಿತ್ತ್ತೂ ತೊಂದರೆಯಾಗದಂತೆ ದುಡಿಯುತ್ತಿರುವ ಮರಿತಿಬ್ಬೇಗೌಡರು ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಹಲವು ವರ್ಷಗಳಿಂದ ಶ್ರಮಿಸಿದ್ದಾರೆ. ಆದ್ದರಿಂದ ಶಿಕ್ಷಕರು ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಎ. ಸಿದ್ದರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ಮಾಜಿ ಅಧ್ಯಕ್ಷ ಎಚ್.ಎಸ್. ನಂಜುಂಡ ಪ್ರಸಾದ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಮಾಜಿ ಸದಸ್ಯ ಕೆರೆಹಳ್ಳಿ ನವೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ. ರಾಜಶೇಖರ್ ತಾಪಂ ಮಾಜಿ ಅಧ್ಯಕ್ಷ ಎಚ್.ಎನ್. ಬಸವರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net