

ಚಾಮರಾಜನಗರ; ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಶ್ರೀಧರ ಅವರು ವರ್ಗಾವಣೆಗೊಂಡು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಚಾಮರಾಜನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಹಿರಿಯ ಸಿವಿಲ್ ನ್ಯಾಯಾಧೀಶರಾಗಿದ್ದ ಎಂ.ಶ್ರೀಧರ ಅವರು ಜಿಲ್ಲಾ, ತಾಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಉಚಿತ ಮತ್ತು ತ್ವರಿತವಾಗಿ ಕಾನೂನು ನೆರವನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಮೂಲಕ ಸಕ್ರಿಯರಾಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿ ಹುದ್ದೆಗೆ ಎಂ.ಶ್ರೀಧರ ಅವರು ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.