ಶಿಕ್ಷಕರ ಸಂಕಷ್ಟಗಳಿಗ ಸ್ಪಂದಿಸುವೆ

28rajesh1
Published on

ಚಾಮರಾಜನಗರ: ಗೌರವ ಧನವನ್ನು ಪಡೆದುಕೊಳ್ಳದೇ, ಇನ್ನು ಹೆಚ್ಚಿನ ಹಣವನ್ನು ಹಾಕಿ ಶಿಕ್ಷಕರ ಕ್ಷೇಮಾಭಿವೃದ್ದಿ ನಿಧಿಯನ್ನು ಸ್ಥಾಪಿಸಿ, ಸಂಕಷ್ಟದಲ್ಲಿರುವ ಶಿಕ್ಷಕರಿಗೆ ನೆರವು ನೀಡಲು ಬದ್ಧನಾಗಿದ್ದೇನೆ ಎಂದು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ತಿಳಿಸಿದರು.

ತಾಲೂಕಿನಲ್ಲಿ ಸೋಮವಾರ ಬಿರುಸಿನ ಚುನಾವಣಾ ಪ್ರಚಾರ ಮಾಡಿದ ಅವರು, ಮರಿಯಾಲ ಐಟಿಐ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್, ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು, ಜೆಎಸ್‌ಎಸ್ ಮಹಿಳಾ ಕಾಲೇಜು ಹಾಗೂ ಸೇವಾ ಭಾರತಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ಶಿಕ್ಷಕ ಮತದಾರರಲ್ಲಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ವಿವೇಕಾನಂದ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಸೂಚನೆಯಂತೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಶಿಕ್ಷಕರು ಉತ್ತಮವಾಗಿ ಸ್ಪಂದಿಸಿದ್ದಾರೆ. ಅವರ ಸೇವಕನಾಗಿ ಕೆಲಸ ಮಾಡುವ ಆಸೆ ನನ್ನದಾಗಿದೆ. ಗುರುಗಳ ಋಣ ತೀರಿಸುವ ಸುದಿನ ಇದಾಗಿದೆ ಎಂದು ಹೇಳಿದರು.

ಶಿಕ್ಷಕರ ಅಶೀರ್ವಾದಿಂದ ನಾನು ವಿಧಾನ ಪರಿಷತ್‌ಗೆ ಆಯ್ಕೆಯಾದರೆ, ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ನಾನು ಬಡತನದಿಂದ ಬೆಳೆದವನು, ಆಗಾಗಿ ಶಿಕ್ಷಕರ ಸಂಕಷ್ಟಗಳು ಅರ್ಥವಾಗಿದೆ. ಹೀಗಾಗಿ ನಿಮ್ಮೆಲ್ಲದ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಶಿಕ್ಷಕರ ನಿಧಿ ಸ್ಥಾಪನೆ ತೆಗೆ ಶಿಕ್ಷಕರ ಬಡಾವಣೆಯನ್ನು ನಿರ್ಮಾಣ ಮಾಡಿ, ಅತ್ಯಂತ ಕಡಿಮೆ ದರದಲ್ಲಿ ಶಿಕ್ಷಕ ಬಂಧುಗಳು ಸಹ ಸ್ವಂತ ನಿವೇಶನವನ್ನು ಹೊಂದಿ ನೆಮ್ಮದಿ ಜೀವನ ನಡೆಸುವಂತಾಗಬೇಕು. ಶಿಕ್ಷಕರ ಶ್ರೇಯೋಭಿವೃದ್ದಿಗೆ ದುಡಿಯವ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಬಿಜೆಪಿ ನಿಕಟ ಪೂರ್ವ ಅಭ್ಯರ್ಥಿ ಬಿ. ನಿರಂಜನ್‌ಕುಮಾರ್, ಬಿಜೆಪಿ ಮುಖಂಡರಾದ ಎಂ.ರಾಮಚಂದ್ರ, ಡಾ.ಎ.ಆರ್. ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ, ಉಪಾಧ್ಯಕ್ಷ ಎಚ್.ಎಂ.ಬಸವಣ್ಣ, ಮಾಜಿ ಅಧ್ಯಕ್ಷ ಆರ್. ಸುಂದರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಮಲೆಯೂರು ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಜೆಡಿಎಸ್ ಮುಖಂಡ ಆಲೂರು ಮಲ್ಲು, ನೂರೊಂದುಶೆಟ್ಟಿ, ನಟರಾಜು, ನಗರ ಮಂಡಲದ ಅಧ್ಯಕ್ಷ ಶಿವರಾಜ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net