ನಿವೃತ್ತ ಶಿಕ್ಷಕನಿಗೆ ಬೀಳ್ಕೊಡುಗೆ

31 HANUR 4
Published on

ಗುಂಡ್ಲುಪೇಟೆ: ತಾಲೂಕಿನ ಬಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ರಾಜಶೇಖರಪ್ಪ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.

ಶುಕ್ರವಾರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಶಿಕ್ಷಕ ರಾಜಶೇಖರಪ್ಪ ಮಾತನಾಡಿ ನನ್ನ ಸೇವಾವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿದ ತೃಪ್ತಿಯಿದೆ. ಸ್ಪರ್ಧಾತ್ಮಕ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಒಳಿತನ್ನು ಮಾಡಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮದ ಮುಖಂಡರು, ಶಿಕ್ಷಕರ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net