3ರಂದು ಶಿಕ್ಷಕ ಮತದಾರರಿಗೆ ಸಾಂದರ್ಭಿಕ ರಜೆ

Teacher Post
Published on

ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯು ಜೂ.3ರಂದು ನಡೆಯಲಿದ್ದು, ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಎಸ್ಟಾಬ್ಲಿಷ್‌ಮೆಂಟ್‌ಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಹಾಗೂ ಮತ ಚಲಾಯಿಸಲಿರುವ ಮತದಾರರಿಗೆ ಸೀಮಿತವಾದಂತೆ ಜೂ.3ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net