ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರಬಂಧ ಸ್ಪರ್ಧೆ

Published on

ಚಾಮರಾಜನಗರ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಲಕಾರ್ಮಿಕರ ಬವಣೆಗಳು ವಿಷಯದ ಬಗ್ಗೆ ಚಿತ್ರಕಲಾ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಬಾಲಕಾರ್ಮಿಕರ ಪದ್ಧತಿ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಜೂ.6ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜೂ.12ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಿಂದ ಬಹುಮಾನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರು (ಮೊ.9886164951) ಸಂಪರ್ಕಿಸುವಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net