

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಇಂಡಿಗನತ್ತ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಶನಿವಾರ ಕಾಡಾನೆಯೊಂದು ರಸ್ತೆಯಲ್ಲಿ ನಿಂತು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿತು.
ಮಲೆಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ ಈ ಮಾರ್ಗದಲ್ಲಿ ಕಾಡಾನೆಯೊಂದು ಸಂಚರಿಸುತ್ತಿದ್ದು, ರಾತ್ರಿ ವೇಳೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು. ಆದರೆ ಶನಿವಾರ ಬೆಳಗ್ಗೆ ಕೆಲಕಾಲ ಅರಣ್ಯ ಪ್ರದೇಶದ ರಸ್ತೆಯಲ್ಲೇ ನಿಂತಿತ್ತು. ಇದರಿಂದ ಈ ವೇಳೆ ಕಾರ್ಯನಿಮಿತ್ತ ಮ.ಬೆಟ್ಟಕ್ಕೆ ತೆರಳುತ್ತಿದ್ದ ಗ್ರಾಮಸ್ಥರು ಆತಂಕ ಪಡುವಂತಾಯಿತು. ಆನೆ ಅರಣ್ಯ ಪ್ರದೇಶದೊಳಗೆ ತೆರಳಿದ ಬಳಿಕ ಜನರು ನಿಟ್ಟುಸಿರು ಬಿಟ್ಟು ತೆರಳಿದರು.