ಮಾಜಿ ಮೇಯರ್ ನಾರಾಯಣಗೆ ಎಂಎಲ್‌ಸಿ ಸ್ಥಾನ ನೀಡಿ

Published on

ಚಾಮರಾಜನಗರ : ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿರುವ ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ನಾರಾಯಣ ಅವರಿಗೆ ವಿಧಾನ ಪರಿಷತ್‌ಗೆ ಅವಕಾಶ ಮಾಡಿಕೊಡಬೇಕು ಎಂದು ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾಧ್ಯಕ್ಷ ಸಿ.ಶಂಕರ ಅಂಕನಶೆಟ್ಟಿಪುರ ಒತ್ತಾಯಿಸಿದರು.

ಜೂನ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 7 ಸ್ಥಾನಗಳು ದೊರೆಯಲಿದೆ. ಇದರಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಯ ಪೌರಕಾರ್ಮಿಕ ಸಮುದಾಯಕ್ಕೆ ಮೀಸಲು ಇಡಬೇಕು. ಅದರಲ್ಲೂ ಪೌರಕಾರ್ಮಿಕರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾಜಿ ಮೇಯರ್ ನಾರಾಯಣ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಪೌರಕಾರ್ಮಿಕರನ್ನು ಸಂಘಟನೆ ಮಾಡುವ ಮೂಲಕ ನಾರಾಯಣ ಅವರು ಅನೇಕ ಹೋರಾಟ ರೂಪಿಸಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೌರಕಾರ್ಮಿಕರನ್ನು ಕಾಯಂ ಮಾಡಿಸುವಲ್ಲಿ ನಾರಾಯಣ ಅವರ ಶ್ರಮ ಅಪಾರ. ಸುಮಾರು 40 ವರ್ಷಗಳಿಂದ ಪೌರಕಾರ್ಮಿಕರ ಏಳ್ಗೆಗಾಗಿ ದುಡಿಯುತ್ತಿರುವ ನಾರಾಯಣ ಅವರನ್ನು ಕಾಂಗ್ರೆಸ್ ಈ ಬಾರಿ ಎಂಎಲ್‌ಸಿ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಪೌರಕಾರ್ಮಿಕರ ಮಹಾಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ರಾಜೇಂದ್ರ, ದಲಿತ ಮುಖಂಡ ಸಂಘಸೇನಾ, ಮೂಕಹಳ್ಳಿ ಮಲ್ಲೇಶ್, ಆನಂದ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net