ಶಾಲಾ ದಾಖಲಾತಿ ಆಂದೋಲನ

01-GPT-4
Published on

ಗುಂಡ್ಲುಪೇಟೆ; ತಾಲೂಕಿನ ಬರಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ 2024-25ನೇ ಸಾಲಿನ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದಾಖಲಾತಿ ಆಂದೋಲನದ ಅಂಗವಾಗಿ ಗ್ರಾಮದ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳಾದ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ್, ಮುಖ್ಯ ಶಿಕ್ಷಕಿ ಜಯಲಕ್ಷ್ಮಮ್ಮ, ಸಹಶಿಕ್ಷಕರಾದ ಬಿ.ಮನು, ರವಿಕುಮಾರ್, ಜ್ಯೋತಿ ಪ್ರಸಾದ್, ವಿನುತಾ, ರಶ್ಮಿ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net