ಕೊಳ್ಳೇಗಾಲ : ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿಗೆ ತನ್ನದೇ ಆದ ಮಹತ್ವವಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ.ವಿಜಯಲಕ್ಷ್ಮೀ ಹೇಳಿದರು.
ಪಟ್ಟಣದ ಶ್ರೀ ಮಹದೇಶ್ವರ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಹೊಸ ಹೊಸ ವಿಚಾರಗಳನ್ನು ಅರ್ಥೈಸಿಕೊಳ್ಳಬೇಕು. ಇದು ಪೈಪೋಟಿ ಯುಗವಾಗಿದ್ದು, ಜ್ಞಾನಾರ್ಜನೆ ಹೊಂದಬೇಕು. ಹೆಚ್ಚಿನ ಕೌಶಾಲಾಭಿವೃದ್ಧಿ ಹೊಂದುವುದರ ಜತೆಗೆ ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ನಾಗೇಂದ್ರಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳು ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಸಬೇಕು. ಮೊಬೈಲ್ ಗೀಳಿನಿಂದ ದೂರವಿದ್ದು ಹೆಚ್ಚು ಪುಸ್ತಕಗಳನ್ನು ಓದುವಂತಾಗಬೇಕು ಎಂದು ಸಲಹೆ ನೀಡಿದರು. ಪ್ರಾಂಶುಪಾಲೆ ಪ್ರೊ.ಜಯಲಕ್ಷ್ಮೀ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ನಾಗೇಂದ್ರಪ್ರಸಾದ್, ಡಾ.ಹೇಮಕುಮಾರ್, ಅರುಣ್ ಕುಮಾರ್, ಡಾ. ಸುಧಾ, ಪ್ರೊ.ಎಸ್.ಸುಂದರಮೂರ್ತಿ, ಪ್ರೊ.ಪ್ರೇಮಾಕುಮಾರಿ, ಜಯಶಂಕರ್, ಡಾ.ವೇಣುಗೋಪಾಲ್. ಸಿದ್ದರಾಜು ಮತ್ತಿತರು ಹಾಜರಿದ್ದರು.