

ಗುಂಡ್ಲುಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಂಘದ ಮುಖಂಡರಾದ ಸುಜಾತಾ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಸಮಾವೇಶಗೊಂಡ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು. ತಮಗೆ ಇಲಾಖೆಯಿಂದ ನೀಡಿರುವ ಮೊಬೈಲ್‌ಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಹೇಮಾವತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.