ಗೆದ್ದ ಮೇಲೆ ಬಂದ ಬೋಸ್

sunil bose
Published on

ಚಾಮರಾಜನಗರ: ಚಾ.ನಗರ ಲೋಕಸಭಾ ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಗೆಲುವು ಖಚಿತವಾದ ಮೇಲೆ ಬಂದರು.

ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸುನೀಲ್‌ಬೋಸ್ ಅವರು ಮತ ಎಣಿಕೆ ಕೇಂದ್ರಕ್ಕೆ ಬಾರದೇ ನೇರವಾಗಿ ಚಾಮುಂಡಿಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದರು. ಅಲ್ಲಿಂದ ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವ ವೇಳೆಯಲ್ಲಿ ಚಾ.ನಗರ-ಮೈಸೂರು ಹೆದ್ದಾರಿಯಲ್ಲಿ ಹಲವಾರು ಕಾರ್ಯಕರ್ತರು ಸುನೀಲ್‌ಬೋಸ್ ಅವರನ್ನು ಸನ್ಮಾನಿಸಿದರು. ಮತ ಎಣಿಕೆ ಕೇಂದ್ರದಲ್ಲಿ ಬಿಜೆಪಿಯ ಕಾರ್ಯಕರ್ತರು ವಿರಳವಾಗಿರುವುದು ಕಂಡುಬಂದಿತು. ಬಿಜೆಪಿಯ ಏಜೆಂಟ್‌ಗಳನ್ನು ಹೊರತುಪಡಿಸಿ ಪಕ್ಷದ ಕಾರ್ಯಕರ್ತರು ಹಾಗೂ ಅಭ್ಯರ್ಥಿಯ ಬೆಂಬಲಿಗರು ಯಾರು ಹೆಚ್ಚಿನ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಬಳಿ ನೆರೆದಿರಲಿಲ್ಲ. ಮಧ್ಯಾಹ್ನದ ಬಳಿಕ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಹೊರತುಪಡಿಸಿದರೆ ಇನ್ನುಳಿದ ಪಕ್ಷದ ಕಾರ್ಯಕರ್ತರು ಕಂಡುಬರಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net