

ಯಳಂದೂರು: ತಾಲೂಕಿನ ಅಂಬಳೆ ಗ್ರಾಮದ ಸುವರ್ಣಾವತಿ ನದಿ ದಡದಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಸೋಮವಾರ ಚಾಮುಂಡೇಶ್ವರಿ ವರ್ಧಂತಿ ಉತ್ಸವ ಸಡಗರದಿಂದ ಜರುಗಿತು.
ವರ್ಧಂತಿ ನಿಮಿತ್ತ ದೇಗುಲವನ್ನು ತಳಿರು-ತೋರಣ ಮತ್ತು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ದೇವಿಗೆ ವಿಶೇಷ ಅಲಂಕಾರ ಮಾಡಿ ಬೆಳಗಿನಿಂದಲೇ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು.
ಸಪ್ತ ಮಾತೃಕೆಯರ ಮೂರ್ತಿಗಳಿಗೆ ಹೂವು ಹೊಂಬಾಳೆಗಳಿಂದ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.