ಕೃಷ್ಣರಾಜ ಒಡೆಯರ್ ಕೊಡುಗೆ ಅವಿಸ್ಮರಣೀಯ

06rajesh3
Published on

ಚಾಮರಾಜನಗರ : ಈ ಹಿಂದೆ ಇದ್ದ ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಅಭಿವೃದ್ದಿ ಹೊಂದಲು ನಾಲ್ವಡಿ ಕೃಷ್ಣರಾಜ್ ಒಡೆಯರ್ ಕಾರಣೀಭೂತರಾಗಿದ್ದಾರೆ ಎಂದು ಕೊಳ್ಳೇಗಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೊಂಗರಳ್ಳಿ ಎಸ್.ನಾಗರಾಜು ಹೇಳಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. 1911ರಲ್ಲಿ ಕೃಷ್ಣರಾಜ ಸಾಗರ ಜಲಾಶಯ ನಿರ್ಮಾಣ, 1900 ರಲ್ಲಿ ಶಿವನಸಮುದ್ರ ಬಳಿ ಜಲವಿದ್ಯುತ್ ಕೇಂದ್ರ ಸ್ಥಾಪನೆ ಮಾಡಿದರು. ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿಗೆ ಆದ್ಯತೆ ನೀಡಿದ್ದರು. ಭದ್ರಾವತಿ ಕಬ್ಬಿಣ ಕಾರ್ಖಾನೆ, ರೈಲು, ಕೈಗಾರಿಕೆ ಸ್ಥಾಪನೆ ಮಾಡಿದರು.ಹೀಗೆ ಹತು ್ತಹಲವು ಸಾಧನೆ ಮಾಡಿ ನಾಡುಕಟ್ಟಿದ ಕೃಷ್ಣರಾಜ ಒಡೆಯರ್ ಕೊಡುಗೆ ಅವಿಸ್ಮರಣೀಯವಾದದ್ದು ಎಂದರು.

ಚಾಮರಾಜನಗರ ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ, ಬರಹಗಾರ ಲಕ್ಷ್ಮೀನರಸಿಂಹ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ಕೆ.ಎಂ.ನಾಗರಾಜು, ಮಹೇಶ್‌ಗೌಡ, ಸರಸ್ವತಿ, ರವಿಚಂದ್ರಪ್ರಸಾದ್ ಕಹಳೆ, ಉಪನ್ಯಾಸಕ ರವಿಚಂದ್ರ, ಬಿ.ಕೆ.ಆರಾಧ್ಯ, ಸುಮುಖ್, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಶಿವಲಿಂಗಮೂರ್ತಿ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net