

ಹನೂರು: ಪಟ್ಟಣದಲ್ಲಿ ಕೆ.ಶಿಪ್. ಯೋಜನೆಯಡಿ ಕೈಗೊಂಡಿರುವ ರಸ್ತೆ ವಿಸ್ತರಣೆ ಕಾಮಗಾರಿ ಸಂಬಂಧ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಹಿನ್ನೆಲೆಯಲ್ಲಿ ಜೂ. 8 ರಂದು ಪಟ್ಟಣದಲ್ಲಿ ವಿದ್ಯುತ್ ವ್ಯತಯವಾಗಲಿದೆ.
ಹನೂರು ಸೆಸ್ಕ್ ಉಪ ವಿಭಾಗದ ವಿದ್ಯುತ್ ವಿತರಣಾ ಕೇಂದ್ರದ ಟೌನ್ ಫೀಡರ್ ವ್ಯಾಪ್ತಿಯಲ್ಲಿ ಎರಡು ದಿನ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ವೇಳೆ ವ್ಯತಯವಾಗಲಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಸೆಸ್ಕ್ ಎಇಇ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.