ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೇ ನಿರಂತರ ಪ್ರತಿಭಟನೆ

06rajesh10
Published on

ಚಾಮರಾಜನಗರ: ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದ ಪ್ರತಿ ಟನ್ ಕಬ್ಬಿಗೆ 4 ಸಾವಿರ ರೂ, ಮುಂಗಡ ನೀಡಬೇಕು ಹಾಗೂ ಇನ್ನಿತರೆ ರೈತರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ರಾಜ್ಯ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ರೈತರ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತೀವ್ರ ಬರಗಾಲ ಮತ್ತು ಪ್ರಕೃತಿ ವಿಕೋಪದ ದಾಳಿಗೆ ಸಿಲುಕಿರುವ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ೋಷಣೆ ಮಾಡಬೇಕು. ಪ್ರತಿ ಎಕರೆಗೆ 25,000 ರೂ. ಬರ ಪರಿಹಾರವನ್ನು ರೈತರ ಖಾತೆಗೆ ಸರ್ಕಾರ ಜಮಾ ಮಾಡಬೇಕು. ಜಿಲ್ಲೆಯಲ್ಲಿ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಳೆದ ವರ್ಷ ಉಪ ಉತ್ಪನ್ನಗಳ ಲಾಭವನ್ನು ಕೊಡಿಸಲು ಕ್ರಮವಹಿಸಬೇಕು. ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸಬೇಕು. ಈ ಸಾಲಿಗೆ ಪ್ರತಿ ಟನ್ ಕಬ್ಬಿಗೆ 4,000 ರೂ. ಮುಂಗಡ ಪಾವತಿ ಮಾಡಬೇಕು. ಇಳುವರಿಯಲ್ಲಿ ಆಗುವ ಮೋಸವನ್ನು ತಪ್ಪಿಸಲು ಸ್ಥಳೀಯ ರೈತ ಮುಖಂಡರ ತೆ ತಜ್ಞರ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಜಾರಿ ಮಾಡಬೇಕು. ತಾಲೂಕಿನ ಗ್ರಾಮೀಣ ಭಾಗದಲ್ಲಿ ಸೂಕ್ತ ಸಮಯಕ್ಕೆ ಸಾರಿಗೆ ಬಸ್ ಒದಗಿಸಬೇಕು. ಕಾಡಂಚಿನ ಪ್ರದೇಶದ ರೈತರ ಬೆಳೆ ಮತ್ತು ಪ್ರಾಣ ರಕ್ಷಣೆಗೆ ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯ ಸರ್ಕಾರ ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿರುವುದನ್ನು ಕೈ ಬಿಡಬೇಕು. ಅಂಗಡಿ ಮಾಲೀಕರು ತಕ್ಷಣ ಸೂಕ್ತ ಸೂಚನೆ ನೀಡಬೇಕು. ಸರ್ಕಾರದ ಸಾಲ ವಿತರಣೆಯ ಕ್ರಮಗಳನ್ನು ಸರಳೀಕರಣ ಗೊಳಿಸಬೇಕು. ಜಿಲ್ಲೆಯ ಅಕ್ರಮ ಕೆರೆಕಟ್ಟೆಗಳ ಒತ್ತುವರಿಯನ್ನು ಶೀಘ್ರ ತೆರವುಗೊಳಿಸಬೇಕು ಎಂದರು.

ಈ ಮೇಲ್ಕಂಡ ಎಲ್ಲ ವಿಚಾರಗಳ ಬಗ್ಗೆ ಜಿಲ್ಲಾಧಿಕಾರಿಗಳು ಜಿಲ್ಲಾ ಮಂತ್ರಿಗಳ ಗಮನಕ್ಕೆ ತಂದು ಜಿಲ್ಲೆಯಲ್ಲಿ ರೈತರ ತೆ ಸಭೆ ನಡೆಸಬೇಕು. ಸೂಕ್ತ ಪರಿಹಾರವನ್ನು ಕಂಡುಹಿಡಿಯಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ 10 ದಿನಗಳ ನಂತರ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ರಾಜ್ಯ ಕಬ್ಬುಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ರಾಜ್ಯ ಕಾರ್ಯದರ್ಶಿ ಮಲೆಯೂರು ಹರ್ಷ, ತಾಲೂಕು ಅಧ್ಯಕ್ಷರಾದ ಅರಳಿಕಟ್ಟೆ ಕುಮಾರ್, ಮಲೆಯೂರು ಬಸವರಾಜಪ್ಪ, ನಂಜುಂಡ ನಾಯಕ, ಸಿದ್ದರಾಜು, ಮಹೇಶ್, ಮಂಜುನಾಥ್, ಗುರುಮಲ್ಲಪ್ಪ, ಮಹೇಶ್, ಅರಳಿ ಕಟ್ಟೆ ಸಿದ್ದಲಿಂಗಪ್ಪ, ಸಿದ್ದಪ್ಪ, ಕನಕ, ಶ್ರೀಕಂಠ, ವೀರನಪುರ ಮಹಾದೇವಸ್ವಾಮಿ ಹಾಗೂ ಇತರರು ಹಾಜರಿದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net