

ಚಾಮರಾಜನಗರ : ತಾಲೂಕಿನ ಸಿದ್ದಯ್ಯನಪುರ ಗ್ರಾಮದ ಉನ್ನತಿ ಟ್ರಸ್ಟ್ ಮತ್ತು ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ (ಟಿವಿಎಸ್) ಕರ್ನಾಟಕ ಕ್ಲಸ್ಟರ್ ವತಿಯಿಂದ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉನ್ನತಿ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಮಾತನಾಡಿ, ಗಿಡ, ಮರಗಳು ಇಂಗಾಲದ ಡೈ ಆಕ್ಸೈಡ್ ಹೀರಿಕೊಂಡು ನಮಗೆ ಆಮ್ಲಜನಕ ನೀಡುತ್ತವೆ. ಮರಗಳಲ್ಲಿ ಪರಿಸರ ಸಮತೋಲನಕ್ಕೆ ಸಹಕಾರಿ ಆಗುವ ಸೂಕ್ಷಾಣು ಜೀವಿಗಳು ಇರುತ್ತವೆ. ಕಾಲಕಾಲಕ್ಕೆ ಮಳೆಯಾಗಿ ಬೆಳೆ ಬೆಳೆಯಲು ಮರಗಳು ಅವಶ್ಯ. ಆದ್ದರಿಂದ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದರು.
ಈ ವೇಳೆ ಗ್ರಾಮದಲ್ಲಿ ಎಸ್‌ಎಸ್‌ಎಲ್ಸಿ, ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನಿ, ಗಿಡವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಚಾಮರಾಜನಗರ, ಕೆ.ಗುಡಿ ವನ್ಯಜೀವಿ ವಲಯ, ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಲ್ಲೂರು ವಲಯ ಅರಣ್ಯಾಧಿಕಾರಿ ಎಸ್.ವಿನೋದ್ ಗೌಡ, ಕೆ.ಗುಡಿ ವನ್ಯ ಜೀವಿ ವಲಯ ಮಹದೇವಸ್ವಾಮಿ ಹಾಗೂ ಇತರರು ಭಾಗವಹಿಸಿದ್ದರು.