

ಹನೂರು; ತಾಲೂಕಿನ ರಾಮಾಪುರ ಬಳಿ ಶನಿವಾರ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಗಾಯಗೊಂಡಿದ್ದಾರೆ.
ತಾಲೂಕಿನ ಮಂಚಾಪುರ ಗ್ರಾಮದ ಗುರುಸ್ವಾಮಿ (45) ಗಾಯಗೊಂಡವರು. ಈತ ಗಾರೆ ಕೆಲಸದ ಮೇಸ್ತ್ರಿಯಾಗಿದ್ದು, ಬೆಳಗ್ಗೆ 9.15ರಲ್ಲಿ ಕೂಲಿ ಕಾರ್ಮಿಕರನ್ನು ರಾಮಾಪುರಕ್ಕೆ ಬಿಟ್ಟು ಬೈಕ್‌ನಲ್ಲಿ ಗ್ರಾಮಕ್ಕೆ ಆಗಮಿಸುತ್ತಿದ್ದನು. ಈ ವೇಳೆ ಪೆಟ್ರೋಲ್ ಬಂಕ್ ಬಳಿಯ ತಿರುವಿನಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದರು. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.