ಗ್ರಾ.ಪಂ. ನೌಕರರ ಸಮಸ್ಯೆ ಪರಿಹಾರಕ್ಕೆ ಯತ್ನ

08-GPT-1
Published on

ಗುಂಡ್ಲುಪೇಟೆ: ಗ್ರಾಮಪಂಚಾಯಿತಿ ನೌಕರರ ಸಮಸ್ಯೆ ಪರಿಹರಿಸುವ ಬಗ್ಗೆ ಸರ್ಕಾರದ ಗಮಕ್ಕೆ ತರಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ಗುಂಡ್ಲುಪೇಟೆ ಪಟ್ಟಣದ ಲ್ಯಾಂಪ್ಸ್ ಸೊಸೈಟಿಯಲ್ಲಿ ಶನಿವಾರ ಸಿಐಟಿಯು ಸಂಘಟನೆಯಿಂದ ಆಯೋಜಿಸಿದ್ದ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಅಭಿವೃದ್ಧಿಯಲ್ಲಿ ಪಂಚಾಯಿತಿಗಳ ಪಾತ್ರ ದೊಡ್ಡದಾಗಿದೆ. ಎಲ್ಲ ಕೆಲಸಕಾರ್ಯಗಳನ್ನು ಪಂಚಾಯಿತಿ ಮಟ್ಟದಲ್ಲಿಯೇ ಅನುಷ್ಠಾನಗೊಳಿಸಬೇಕಾಗಿದೆ. ಇದರಿಂದ ಎಲ್ಲ ಪಂಚಾಯಿತಿಗಳಲ್ಲಿಯೂ ನೌಕರರ ಮೇಲೆ ತುಂಬಾ ಒತ್ತಡಗಳಿವೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಡಗೌಡ, ಜಿಲ್ಲಾಧ್ಯಕ್ಷ ಬರಗಿ ಸಿದ್ದರಾಜು, ಮಾಜಿ ಅಧ್ಯಕ್ಷ ಕೊತ್ತಲವಾಡಿ ಮಹದೇವಸ್ವಾಮಿ, ಉಪಾಧ್ಯಕ್ಷ ಮಲ್ಲು, ತಾಲೂಕು ಅಧ್ಯಕ್ಷ ಮಹೇಂದ್ರ, ಮಾಜಿ ಅಧ್ಯಕ್ಷ ತೆರಕಣಾಂಬಿ ಮಂಜು, ಚಾಮರಾಜನಗರ ತಾಲೂಕು ಅಧ್ಯಕ್ಷ ಕೃಷ್ಣ, ಯಳಂದೂರು ತಾಲೂಕು ಅಧ್ಯಕ್ಷೆ ಮಹದೇವಮ್ಮ, ಪೌರಕಾರ್ಮಿಕರ ಜಿಲ್ಲಾಧ್ಯಕ್ಷ ಆರ್ಮುಗಂ, ನಿರ್ದೇಶಕರಾದ ರಾಜಪ್ಪ, ಶಿವಮ್ಮ, ಶಿವಶಂಕರಪ್ಪ, ಸುನಿಲ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net