ಕೊಳ್ಳೇಗಾಲದಲ್ಲಿ ನೇತ್ರ ತಪಾಸಣೆ ಶಿಬಿರ

Published on

ಕೊಳ್ಳೇಗಾಲ: ಪಟ್ಟಣದ ವಿಶ್ವಚೇತನ ವಿದ್ಯಾಸಂಸ್ಥೆ ಆವರಣದಲ್ಲಿ ಭಾನುವಾರ ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಗಳು, ರೋಟರಿ ಕ್ಲಬ್, ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದ ‘ನೇತ್ರ ನಿರಂತರ’ ಉಚಿತ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಮಾತನಾಡಿ, ದಿವಂಗತ ಎಚ್.ಕೃಷ್ಣಸ್ವಾಮಿ ಈ ಭಾಗದ ಬಡ ಜನರ ಸೇವೆ ಮಾಡಿದ್ದಾರೆ. ಅವರ ಹೆಸರಿನಲ್ಲಿ ಎಚ್.ಕೆ. ಟ್ರಸ್ಟ್ ಸೇವಾ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿದೆ. ಅದರಲ್ಲಿ ನೇತ್ರ ನಿರಂತರ ಕಾರ್ಯಕ್ರಮವೂ ಒಂದಾಗಿದೆ. ಕಳೆದ 14 ತಿಂಗಳಿನಿಂದ ಪ್ರತಿ ತಿಂಗಳ ಎರಡನೇ ಭಾನುವಾರ ವಿಶ್ವಚೇತನ ವಿದ್ಯಾ ಸಂಸ್ಥೆ ಆವರಣದಲ್ಲಿ ಉಚಿತ ಕಣ್ಣಿತ ತಪಾಸಣಾ ಶಿಬಿರವನ್ನು ನಡೆಸುತ್ತಿದ್ದು, ದೃಷ್ಟಿ ಸಮಸ್ಯೆಯಿರುವ ನೂರಾರು ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರು ಶಿಬಿರದ ಉಚಿತ ಪ್ರಯೋಜನ ಪಡೆಯಬೇಕು. ಇಲ್ಲಿವರೆಗೆ ನೂರಾರು ಜನರು ಇದರ ಉಪಯೋಗ ಪಡೆದಿದ್ದಾರೆ ಎಂದರು. 130 ಜನರು ಭಾಗಿ: ಶಿಬಿರದಲ್ಲಿ 130 ಜನ ತಪಾಸಣೆಗೆ ಒಳಗಾದರು. 68 ಜನರನ್ನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಿ ಅರವಿಂದ ಕಣ್ಣಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಯಿತು.

ರೋಟರಿ ಮಿಡ್ ಟೌನ್ ಸಂಸ್ಥೆಯ ಅಧ್ಯಕ್ಷ ದಕ್ಷಿಣಮೂರ್ತಿ, ಅರವಿಂದ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಪ್ರಸನ್ನ, ಡಾ.ಶೀತಲ್, ವಿಶ್ವಚೇತನ ವಿದ್ಯಾ ಸಂಸ್ಥೆ ವ್ಯವಸ್ಥಾಪಕ ರವೀಂದ್ರ, ಗಾಯತ್ರಿ, ಹರ್ಷಿತಾ, ಶಾಂತರಾಜು, ಅರುಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net