ಜೂ. 14ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Power Cut
Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಸಂತೇಮರಹಳ್ಳಿ ಹಾಗೂ ಗುಂಡ್ಲುಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಒಂದನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಜೂ.14 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಉಮ್ಮತ್ತೂರು, ಬಾಗಳಿ, ಲಿಂಗಣಾಪುರ, ಜನ್ನೂರು, ಜನ್ನೂರು ಹೊಸೂರು, ಹಳ್ಳಿಕೆರೆಹುಂಡಿ, ಗಣಗನೂರು, ಗಣಗನೂರುಪುರ, ನವಿಲೂರು, ಆಲ್ದೂರು, ಬಿಎಂಕೆ ಹುಂಡಿ, ಗೊದ್ದಲಹುಂಡಿ ಹಾಗೂ ಬೊಮ್ಮನಹಳ್ಳಿ, ಕುಂದಗೆರೆ, ಕಟ್ನವಾಡಿ, ದೇಪಾಪುರ, ಎನ್.ಜೆ.ವೈ, ಗೋವಿಂದಪುರ, ಕಗ್ಗಳ, ಕೆಲಸಿಪುರ, ಲಕ್ಕೂರು, ಫ್ಯಾಕ್ಟರಿ, ವಾಟರ್ ಸಪ್ಲೈ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net