

ಚಾಮರಾಜನಗರ: ಜಿಲ್ಲೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿದೆ. ಮೂಲಸೌಕರ್ಯಗಳ ಕೊರತೆ ಕಾಡುತ್ತಿದೆ ಎಂದು ಯಳಂದೂರಿನ ಚಾಮಲಾಪುರದ ವಿಜಿ ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್‌ಬೋಸ್ ಮೇಲೆ ಜನರು ಇಟ್ಟಿರುವ ನಿರೀಕ್ಷೆಗಳ ಕುರಿತು ಅವರು ವಿಜಯವಾಣಿಯೊಂದಿಗೆ ಮಾತನಾಡಿದರು. ಜಿಲ್ಲೆಯ ಗಂಭೀರ ಸಮಸ್ಯೆಗಳನ್ನು ಸಂಸದ ಸುನೀಲ್ ಬೋಸ್ ಅಧಿವೇಶನದಲ್ಲಿ ಗಮನ ಸೆಳೆಯಬೇಕು. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ಆದ್ಯತೆ ನೀಡಬೇಕಿದೆ. ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ ರೀತಿ ಕೆಲಸ ಮಾಡಬೇಕು. ಕ್ಷೇತ್ರದಾದ್ಯಂತ ಸುತ್ತಾಡಿ ಜನರ ಕಷ್ಟ-ಸುಖಗಳಿಗೆ ಸ್ಪಂದಿಸಬೇಕು ಎಂದು ಹೇಳಿದ್ದಾರೆ.