ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿ

Chikkaraju
Published on

ಚಾಮರಾಜನಗರ: ಜಿಲ್ಲೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಇಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ಬಡ ಜನರ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಾಗಲಿದೆ ಎಂದು ಕೊಳ್ಳೇಗಾಲ ಶಿಕ್ಷಕ ಚಿಕ್ಕರಾಜು ಹೇಳಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್‌ಬೋಸ್ ಮೇಲೆ ಜನರು ಇಟ್ಟಿರುವ ನಿರೀಕ್ಷೆಗಳ ಕುರಿತು ಅವರು ವಿಜಯವಾಣಿಯೊಂದಿಗೆ ಮಾತನಾಡಿದರು. ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿಯಿಂದ ಹೊರಬರಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ನೂತನ ಸಂಸದ ಸುನೀಲ್‌ಬೋಸ್ ತಿಂಗಳಿಗೊಮ್ಮೆ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿ. ಕ್ಷೇತ್ರಗಳಿಗೆ ಭೇಟಿ ನೀಡಿದಾಗಲೆಲ್ಲಾ ಸರ್ಕಾರಿ ಶಾಲೆಗೆ ಬಂದು ಪರಿಶೀಲನೆ ನಡೆಸಲಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net