ಕೈಗಾರಿಕೆಗಳ ಸ್ಥಾಪನೆಯಾಗಲಿ

Siddaraju
Published on

ಚಾಮರಾಜನಗರ: ಜಿಲ್ಲೆಯಲ್ಲಿ ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೈಗಾರಿಕೆಗಳ ಸ್ಥಾಪನೆ ಕಡೆಗೆ ಸಂಸದರು ಗಮನ ಹರಿಸಬೇಕು ಎಂದು ಯಳಂದೂರು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮೀರೆ ಸಿದ್ದರಾಉ ಸಲಹೆ ನೀಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್‌ಬೋಸ್ ಮೇಲೆ ಜನರು ಇಟ್ಟಿರುವ ನಿರೀಕ್ಷೆಗಳ ಕುರಿತು ಅವರು ವಿಜಯವಾಣಿಯೊಂದಿಗೆ ಮಾತನಾಡಿದರು. ಚಾಮರಾಜನಗರದ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಂತೆಯೇ ತಾಲೂಕು ಕೇಂದ್ರಗಳ ಕೈಗಾರಿಕಾ ಪ್ರದೇಶಗಳಲ್ಲಿ ಅಲ್ಲಿನ ಸೌಲಭ್ಯಗಳನ್ನು ವೃದ್ಧಿಗೊಳಿಸಬೇಕು. ಆಯಾ ಪ್ರದೇಶಗಳ ವಿಶಿಷ್ಟತೆಗೆ ಆಧರಿಸಿ ಕೈಗಾರಿಕೆಗಳನ್ನು ಸ್ಥಾಪಿಸಿ ಜಿಲ್ಲೆಯ ಪ್ರಗತಿಗೆ ಸಹಕರಿಸಬೇಕು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net