ಹನೂರು ಅಭಿವೃದ್ಧಿಪಡಿಸಿ

hanumegowda
Published on

ಚಾಮರಾಜನಗರ: ಜಿಲ್ಲೆಯಲ್ಲಿಯೇ ಹೆಚ್ಚು ವಿಸ್ತೀರ್ಣ ಹೊಂದಿರುವ ಹನೂರು ತಾಲೂಕಿನಲ್ಲಿ ಹೆಚ್ಚಿನ ರೈತರು ಕೃಷಿಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ ಇರುವ ಜಲಾಶಯಗಳ ಮೂಲಕ ಸಮರ್ಪಕ ನೀರಾವರಿ ಸೌಕರ್ಯ ಕಲ್ಪಿಸಬೇಕು ಎಂದು ಹನೂರಿನ ಹನುಮೇಗೌಡ ಸಲಹೆ ನೀಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್‌ಬೋಸ್ ಮೇಲೆ ಜನರು ಇಟ್ಟಿರುವ ನಿರೀಕ್ಷೆಗಳ ಕುರಿತು ಅವರು ವಿಜಯವಾಣಿಯೊಂದಿಗೆ ಮಾತನಾಡಿದರು. ಜತೆಗೆ ಲಕ್ಷಾಂತರ ಭಕ್ತರು ಭೇಟಿ ನೀಡುವ ಮ.ಬೆಟ್ಟದ ಮುಖ್ಯ ರಸ್ತೆ ಅಭಿವೃದ್ಧಿಯಾಗಬೇಕು. ಅಲ್ಲದೇ ಗ್ರಾಮಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಾಗಬೇಕು. ಈ ಬಗ್ಗೆ ನೂತನ ಸಂಸದರು ಗಮನಹರಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net