ಚಾ.ನಗರ ವಿವಿಗೆ ಅನುದಾನ ನೀಡಿ

Mallikarjunaswamy
Published on

ಚಾಮರಾಜನಗರ: ಈ ಹಿಂದೆ ಸಂಸದರಾಗಿದ್ದ ಆರ್.ಧ್ರುವನಾರಾಯಣ್ ಜಿಲ್ಲಾ ಕೇಂದ್ರಕ್ಕೆ ತಂದಿರುವ ಯೋಜನೆಗಳಿಗೆ ಮತ್ತಷ್ಟು ಅನುದಾನ ಕೊಡುವ ಮೂಲಕ ಆ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಚಾಮರಾಜನಗರ ವಿಶ್ವ ವಿದ್ಯಾಲಯದ ಅರ್ಥಶಾಸ ವಿಭಾಗದ ಪ್ರಾಧ್ಯಾಪಕ ಮಲ್ಲಿಕಾರ್ಜುನಸ್ವಾಮಿ ಒತ್ತಾಯಿಸಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್‌ಬೋಸ್ ಮೇಲೆ ಜನರು ಇಟ್ಟಿರುವ ನಿರೀಕ್ಷೆಗಳ ಕುರಿತು ಅವರು ವಿಜಯವಾಣಿಯೊಂದಿಗೆ ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿರುವ ನೂತನ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನವನ್ನು ತರಬೇಕು. ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಬೇಕು. ಮೇಕೆದಾಟು ಯೋಜನೆ ಅನುಷ್ಠಾನ, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಗಮನ ಹರಿಸಬೇಕು. ಚಾಮರಾಜನಗರ-ಮೆಟ್ಟುಪಾಳ್ಯಂ ರೈಲು ಯೋಜನೆಗೆ ಮರುಜೀವ ನೀಡಬೇಕು. ಗ್ರಾನೈಟ್ ಪಾರ್ಕ್ ನಿರ್ಮಾಣ ಮಾಡುವ ಮೂಲಕ ಜಿಲ್ಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಬೇಕು. ಗ್ರಾಮೀಣ ಮತ್ತು ಗುಡಿ ಕೈಗಾರಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡಬೇಕು. ಕೇಂದ್ರ ಪುರಸ್ಕೃತ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸಿ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net